ರಾಮನಗರ : ರೈತರೊಬ್ಬರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ರಾಮನಗರ ಎಸ್ಪಿ ಸಂತೋಷ್ ಬಾಬುಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆವಾಜ್ ಹಾಕಿರುವ ಘಟನೆ ನಡೆದಿದೆ.
ಹೌದು, ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರು ರೈತರೊಬ್ಬರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ಮಾಹಿತಿ ನೀಡಿದರು. ಕೂಡಲೇ ಎಸ್ಪಿಗೆ ಕರೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, 500 ಬಾಟೆಲ್ ಮದ್ಯ ಸಿಕ್ಕವನಿಗೆ ಜಾಮೀನು ನೀಡಿದ್ದೀರಿ. 20 ಬಾಟೆಲ್ ಸಿಕ್ಕವನನ್ನು ಜೈಲಿಗೆ ಕಳುಹಿಸಿದ್ದೀರಾ? ನಾವೂ ಕನಕಪುರದವರಂತೆ ಮಾತನಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇನ್ನು, ಆರೋಪಿ ರೈತರೊಬ್ಬರನ್ನು ಸಿಇಎನ್ ಠಾಣೆ ಸಿಬ್ಬಂದಿ ಬಂಧಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.