Ayushman Bharat Yojana | ಹಿರಿಯ ನಾಗರಿಕರಿಗೆ ಸಂತಸದ ಸುದ್ದಿ; ಏನೆಲ್ಲಾ ಸೌಲಭ್ಯ ಸಿಗಲಿದೆ? ಯಾರು ಅರ್ಹರು? ಇಲ್ಲಿದೆ ಮಾಹಿತಿ

Ayushman Bharat Yojana : ಹಿರಿಯ ನಾಗರಿಕರಿಗೆ ಸಂತಸದ ಸುದ್ದಿ ನೀಡಿದ್ದು, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್‌ ಭಾರತ್‌ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ…

Ayushman Bharat Yojana

Ayushman Bharat Yojana : ಹಿರಿಯ ನಾಗರಿಕರಿಗೆ ಸಂತಸದ ಸುದ್ದಿ ನೀಡಿದ್ದು, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್‌ ಭಾರತ್‌ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡುವ ಸಾಧ್ಯತೆಯಿದೆ.

ಹೌದು, ಹಿರಿಯ ನಾಗರಿಕರಿಗೆ 5 ಲಕ್ಷ ರೂ ಉಚಿತ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಆಯುಷ್ಮಾನ್ ಭಾರತ್‌ ಯೋಜನೆಯಲ್ಲಿ ಕೇಂದ್ರ ಸರ್ಕಾರ ಏನೆಲ್ಲಾ ಮಹತ್ವದ ಬದಲಾವಣೆ ಮಾಡಿದೆ. ಏನೆಲ್ಲಾ ಸೌಲಭ್ಯ ಸಿಗಲಿದೆ? ಯಾರು ಅರ್ಹರು? ಎಂಬುದನ್ನು ನೋಡೋಣ

ಇದನ್ನೂ ಓದಿ: Ayushman Bharat Yojana : ಹಿರಿಯ ನಾಗರಿಕರಿಗೆ GOOD NEWS

Vijayaprabha Mobile App free

Ayushman Bharat Yojana : ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ

70 ವರ್ಷ ಮೇಲ್ಪಟ್ಟವರಿಗೂ ಯಾವುದೇ ಆದಾಯದ ಮಿತಿಯಿಲ್ಲದೆ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯನ್ನು ವಿಸ್ತರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ.

Ayushman Bharat Yojana benefits – ಏನೆಲ್ಲಾ ಸೌಲಭ್ಯ ಸಿಗಲಿದೆ?

ಈ ಯೋಜನೆಯಡಿ ಹಿರಿಯ ನಾಗರಿಕರು 5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಪಡೆಯಬಹುದು. ದೇಶದ ಸುಮಾರು 4.5 ಕೋಟಿ ಕುಟುಂಬಗಳು ಈ ಯೋಜನೆಗೆ ಒಳಪಡಲಿದ್ದು ಸುಮಾರು 6 ಕೋಟಿ ಹಿರಿಯ ನಾಗರಿಕರಿಗೆ ಅನುಕೂಲವಾಗಲಿದೆ.

ಹೆಚ್ಚುವರಿ ಟಾಪ್-ಅಪ್ ಕವರ್

ಈಗಾಗಲೇ ಈ ಯೋಜನೆಯ ಭಾಗವಾಗಿರುವ ಕುಟುಂಬಗಳಿಗೆ ಸೇರಿದ 70 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ವರ್ಷಕ್ಕೆ 5 ಲಕ್ಷದವರೆಗೆ ಹೆಚ್ಚುವರಿ ಟಾಪ್-ಅಪ್ ಕವರ್ ಅನ್ನು ಪಡೆಯುತ್ತಾರೆ.

ಇದನ್ನೂ ಓದಿ: Diwali holiday | ಬೆಳಕಿನ ಹಬ್ಬ ದೀಪಾವಳಿ; ಸಾಲು ಸಾಲು ಸರ್ಕಾರಿ ರಜೆ

ಇತರೆ ಯೋಜನೆಗಳಲ್ಲಿರುವವರಿಗೆ ಆಯ್ಕೆ ಏನು?

ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (CGHS), ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS), ಆಯುಷ್ಮಾನ್ ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಗಳು (CAPF) ನಂತಹ ಇತರ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿರುವ ಹಿರಿಯ ನಾಗರಿಕರು ಎರಡರಲ್ಲಿ ಒಂದನ್ನು ಆಯ್ಕೆ ಮಾಡಬಹುದು.

Eligible for Ayushman Bharat Yojana – ಯಾರು ಅರ್ಹರು?

ಖಾಸಗಿ ಆರೋಗ್ಯ ವಿಮಾ ಪಾಲಿಸಿಗಳು ಅಥವಾ ಉದ್ಯೋಗಿಗಳ ರಾಜ್ಯ ವಿಮಾ ಯೋಜನೆ ಅಡಿಯಲ್ಲಿ ಈಗಾಗಲೇ ಪ್ರಯೋಜನಗಳನ್ನು ಪಡೆಯುತ್ತಿರುವ ಹಿರಿಯ ನಾಗರಿಕರು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.