Ayushman Bharat Yojana : 70 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಆರೋಗ್ಯ ವಿಮೆ; ಕೇಂದ್ರದ ಮಹತ್ವದ ನಿರ್ಧಾರ

Ayushman Bharat Yojana : ಪ್ರಧಾನಿ ಮೋದಿ ಸರ್ಕಾರವು ದೇಶದ ಜನತೆಗೆ ಗುಡ್‌ ನ್ಯೂಸ್‌ ನೀಡಿದ್ದು, ಆಯುಷ್ಮಾನ್ ಭಾರತ್ (Ayushman Bharat Yojana) ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ 70 ಮತ್ತು ಅದಕ್ಕಿಂತ…

Ayushman Bharat Yojana

Ayushman Bharat Yojana : ಪ್ರಧಾನಿ ಮೋದಿ ಸರ್ಕಾರವು ದೇಶದ ಜನತೆಗೆ ಗುಡ್‌ ನ್ಯೂಸ್‌ ನೀಡಿದ್ದು, ಆಯುಷ್ಮಾನ್ ಭಾರತ್ (Ayushman Bharat Yojana) ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ 70 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಎಲ್ಲಾ ನಾಗರಿಕರಿಗೆ ಆರೋಗ್ಯ ವಿಮೆ ನೀಡಲು ಕೇಂದ್ರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಈ ಯೋಜನೆಯಡಿ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಪರಿಗಣಿಸದೆ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ₹5 ಲಕ್ಷದವರೆಗಿನ ಉಚಿತ ಆರೋಗ್ಯ ರಕ್ಷಣೆಯನ್ನು ಪಡೆಯಲಿದ್ದಾರೆ ಎಂದು ಅವರು ಹೇಳಿದರು.

ಇದನ್ನು ಓದಿ: ಇಂದು ಭಾದ್ರಪದ ನವಮಿ ತಿಥಿ; ಇಲ್ಲಿದೆ ಶುಭ ಮುಹೂರ್ತ, ಅಶುಭ ಮುಹೂರ್ತದ ಮಾಹಿತಿ!

Vijayaprabha Mobile App free

ಹೌದು, ಈ ಸಭೆಯಲ್ಲಿ ಕೇಂದ್ರ ಸರ್ಕಾರದ ಆಯುಶ್ಮಾನ್ ಯೋಜನೆಯ ಮೀತಿಯನ್ನು ಹೆಚ್ಚಸಲು ತೀರ್ಮಾನಿಸಲಾಗಿದ್ದು, 70 ವರ್ಷ ಮೇಲ್ಪಟ್ಟವರು ಈ ಯೋಜನೆಗೆ ತರಲು ಅನುಮೊದಿಸಲಾಗಿದೆ. ಇದರಿಂದ 4.5 ಕೋಟಿ ಕುಟುಂಬಗಳ 6 ಕೋಟಿ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ನ ಉಚಿತ ಆರೋಗ್ಯ ವಿಮೆಯ ಸೌಲಭ್ಯ ಸಿಗಲಿದೆ. ಅರ್ಹ ಫಲಾನುಭವಿಗಳಿಗೆ ಹೊಸ ಕಾರ್ಡ್‌ ನೀಡಲು ನಿರ್ಧರಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.