ತಮ್ಮದೇ ಸಚಿವರ ಮತ್ತೆ ಸಿಡಿದೆದ್ದಿರುವ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲವು ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಹೇಳಿದ್ದಾರೆ.
ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಕೆಲವರು ನಮ್ಮಿಂದಲೇ ಸರ್ಕಾರ, ನಾವಿಲ್ಲದಿದ್ದರೆ ಏನೂ ನಡೆಯುವುದಿಲ್ಲ ಎಂಬ ಅಹಂನಲ್ಲಿದ್ದು, ಇಂಥವರಿಂದ ಪಕ್ಷ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು, ಕೂಡಲೇ ಇಂತಹ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಪಕ್ಷ ನಿಷ್ಠರಿಗೆ ಅವಕಾಶ ಕೊಡಬೇಕೆಂದು ಕೋರಿದರಲ್ಲದೆ, ಇಂತಹ ದುರಾಹಂಕಾರಿ ಸಚಿವರನ್ನು ತತ್‍ಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಿದರು.
ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ ಎಂದು ಹೇಳಿದ ಅವರು, ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಿದ್ದು, ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಶಾಸಕ ರೇಣುಕಾಚಾರ್ಯ ಸ್ಪಷ್ಟಪಡಿಸಿದರು.