ಬೆಂಗಳೂರು: ಜುಲೈ 10ರಂದು ಬಕ್ರೀದ್ ಹಬ್ಬವಿದ್ದು, ಕಟ್ಟುನಿಟ್ಟಿನ ಆದೇಶ ಹೊರಡಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ರಾಜ್ಯ ಸರ್ಕಾರ ಮಾರ್ಗಸೂಚಿ:
* ಬಕ್ರೀದ್ ಹಬ್ಬದಂದು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ನಿಯಮ ಉಲ್ಲಂಘಿಸುವಂತಿಲ್ಲ. ಗೋಹತ್ಯೆ ನಿಷೇಧ ಕಾನೂನು ಪಾಲಿಸಬೇಕು
*ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಮರು ಎಲ್ಲೆಂದರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಜಿಲ್ಲಾಡಳಿತ, ಸ್ಥಳೀಯ ಆಡಳಿತ ನಿಗದಿಪಡಿಸಿದ ಜಾಗದಲ್ಲೇ ಮುಸ್ಲಿಮರು ಪ್ರಾರ್ಥನೆ ಮಾಡಬೇಕು.
*ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ವಯ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಬೇಕು
*ಸಾರ್ವಜನಿಕ ಪ್ರದೇಶದಲ್ಲಿ ಖುರ್ಬಾನಿ ನಿಷೇಧ ಮಾಡಲಾಗಿದೆ.
*ಪ್ರಾಣಿ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳದಲ್ಲಿ ವಿಲೇವಾರಿ ಮಾಡುವಂತಿಲ್ಲ.