ಸರ್ಕಾರ ಹಾಗೂ ಸಾರಿಗೆ ಇಲಾಖೆ Rapido, OLA ಮತ್ತು Uber ಗಳಿಗೆ ಬೈಕ್ ಮೂಲಕ ಪ್ರಯಾಣಿಕರನ್ನು ಕರೆದೊಯ್ಯಲು ಅನುಮತಿ ನೀಡಿದ್ದನ್ನು ವಿರೋಧಿಸಿ ರಾಜ್ಯದ 21 ಆಟೋ ಸಂಘಟನೆಗಳು ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಿದ್ದು, ಇಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: SMS ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?
ಹೌದು, ಚಾಲಕರು ಇಂದು ಒಂದು ದಿನ ಸಂಪೂರ್ಣ ಆಟೋ ಸಂಚಾರ ಬಂದ್ ಮಾಡಲು ನಿರ್ಧರಿಸಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ರೇಸ್ ಕೋರ್ಸ್ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲಾನ್ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಡೆಡ್ಲೈನ್ ನೀಡಿದ್ದರು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗದ ಹಿನ್ನೆಲೆ ಆಟೋ ಚಾಲಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಾಳೆ 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ಬಂದ್ ಆಗಲಿದೆ ಎನ್ನಲಾಗಿದೆ.
ಇದನ್ನು ಓದಿ: ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಕಬ್ಜ ಸಿನಿಮಾ, ಹಳೇ ದಾಖಲೆಗಳು ಧೂಳಿಪಟ
ಹಾಗಾಗಿ ಇಂದು ಆಟೋ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆಯಿದೆ. ಮತ್ತೊಂದೆಡೆ, ನೇರನೇಮಕಾತಿಗೆ ಆಗ್ರಹಿಸಿ, ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ಎರಡೂ ಬಂದ್ ಬಿಸಿ ಸರ್ಕಾರಕ್ಕೆ ತಟ್ಟಲಿದೆ.
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಇನ್ಮುಂದೆ ಸಿಗಲಿದೆ ಎಟಿಎಂನಿಂದ ರೇಷನ್
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment