ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಇಮೇಲರ್ ಬಂಧನ!

ಬೆಂಗಳೂರು: ಕಾಲೇಜುಗಳನ್ನು ಸ್ಪೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿ ದೀಪಂಜನ್ ಮಿತ್ರ(48) ಎಂಬುವವನನ್ನು ಬೆಂಗಳೂರಿನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಸುಧಾರಿತ ಸ್ಪೋಟಕ ಸಾಧನಗಳನ್ನು ಬಳಸಿದ ಹೈಡ್ರೋಜನ್ ಆಧಾರಿತ ಬಾಂಬ್‌ಗಳನ್ನು ಇರಿಸಿದ್ದಾಗಿ…

ಬೆಂಗಳೂರು: ಕಾಲೇಜುಗಳನ್ನು ಸ್ಪೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿ ದೀಪಂಜನ್ ಮಿತ್ರ(48) ಎಂಬುವವನನ್ನು ಬೆಂಗಳೂರಿನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಸುಧಾರಿತ ಸ್ಪೋಟಕ ಸಾಧನಗಳನ್ನು ಬಳಸಿದ ಹೈಡ್ರೋಜನ್ ಆಧಾರಿತ ಬಾಂಬ್‌ಗಳನ್ನು ಇರಿಸಿದ್ದಾಗಿ ಮೂರು ಕಾಲೇಜುಗಳಿಗೆ ಇಮೇಲ್ ರವಾನಿಸಿದ್ದ. ಈ ಸಂಬಂಧ ಎರಡು ಕಾಲೇಜುಗಳಿಂದ ಬಂದಿದ್ದ ದೂರಿನನ್ವಯ ವಿವಿ ಪುರಂ ಮತ್ತು ಹನುಮಂತನಗರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗುರುವಾರ ಬಂಧಿಸಿದ್ದಾರೆ.

ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(BIT), ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜುಗಳಿಗೆ ಅಕ್ಟೋಬರ್ 4 ರಂದು s-ve-sekr@hotmail.com ವಿಳಾಸದಿಂದ ಬೆದರಿಕೆ ಇಮೇಲ್‌ಗಳು ಬಂದಿದ್ದವು. ಮೇಲ್ ಬಂದ ಕೆಲವೇ ಕ್ಷಣಗಳಲ್ಲಿ ಬಿಐಟಿ ಕಾಲೇಜಿನ ಪ್ರಾಂಶುಪಾಲರು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರು ಸಹ ಅದೇ ದಿನ ಹನುಮಂತನಗರ ಪೊಲೀಸ್ ಠಾಣೆಗೆ ತೆರಳಿ ಬೆದರಿಕೆ ಇಮೇಲ್ ಕುರಿತು ದೂರು ದಾಖಲಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರು, ವಿವಿ ಪುರಂ ಮತ್ತು ಹನುಮಂತನಗರ ಪೊಲೀಸ್ ಅಧಿಕಾರಿಗಳನ್ನೊಳಗೊಂಡು, ಲೋಕೇಶ ಬರಮಪ್ಪ ಜಗಲಾಸರ್ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು.

Vijayaprabha Mobile App free

ಅದರಂತೆ ತನಿಖೆ ಕೈಗೊಂಡ ತಂಡ ತಾಂತ್ರಿಕ ಅಂಶಗಳನ್ನು ಆಧರಿಸಿ ಡಾರ್ಜಿಲಿಂಗ್ ಜಿಲ್ಲೆಯ ಸಾಲಿಸ್‌ಬರಿ ಟೌನ್‌ನಲ್ಲಿ ಅಡಗಿದ್ದ ಶಂಕಿತ ವ್ಯಕ್ತಿಯನ್ನು ಪತ್ತೆಹಚ್ಚಿದ್ದವು. ಅಕ್ಟೋಬರ್ 17 ರಂದು ಆರೋಪಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಬೆದರಿಕೆ ಇಮೇಲ್ ಕಳುಹಿಸಿದ್ದನ್ನು ಆರೋಪಿ ಒಪ್ಪಿಕೊಂಡಿದ್ದಾಗಿ ತಿಳಿದುಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.