ಮುಸ್ಲಿಮರಿಗೆ ಮತದಾನ ಹಕ್ಕು ನೀಡದಂತೆ ಚಂದ್ರಶೇಖರ ಸ್ವಾಮೀಜಿ ಹೇಳಿಕೆ: FIR ದಾಖಲು

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡದಂತೆ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ. ಸ್ವಾಮೀಜಿ ‘ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ…

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡದಂತೆ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ. ಸ್ವಾಮೀಜಿ ‘ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾಗಿ ಸ್ವಾಮೀಜಿ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬುವವರು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು‌.

ದೂರು ದಾಖಲಿಸಿಕೊಂಡಿದ್ದ ಪೊಲೀಸರು ಸ್ವಾಮೀಜಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತ 299ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ.

Vijayaprabha Mobile App free

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 26 ರಂದು ನಡೆದ ಭಾರತೀಯ ಕಿಸಾನ್ ಸಂಘದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿ ಪಾಲ್ಗೊಂಡಿದ್ದರು‌. 

ಈ ವೇಳೆ ಮಾತನಾಡಿದ ಅವರು, ‘ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.