Kaveri Bill: ಬೆಂಗಳೂರಿಗರಿಗೆ ಶೀಘ್ರವೇ ಕಾವೇರಿ ಶಾಕ್!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ನಿವಾಸಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆಯಾಗುವ ಸುಳಿವು ಸಿಕ್ಕಿದೆ. ನೀರಿನ ದರ ಏರಿಕೆ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾ‌ರ್ ಅವರಿಗೆ ಮನವಿ ಸಲ್ಲಿಸಲು…

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ನಿವಾಸಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆಯಾಗುವ ಸುಳಿವು ಸಿಕ್ಕಿದೆ.

ನೀರಿನ ದರ ಏರಿಕೆ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾ‌ರ್ ಅವರಿಗೆ ಮನವಿ ಸಲ್ಲಿಸಲು ಜಲಮಂಡಳಿ ಸಿದ್ಧತೆ ನಡೆಸಿದೆ. ಕೆಲ ತಿಂಗಳ ಹಿಂದೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾ‌ರ್ ಕಾವೇರಿ ನೀರಿನ ದರ ಪರಿಷ್ಕರಣೆ ಮಾಡುವ ಬಗ್ಗೆ ಸುಳಿವು ನೀಡಿದ್ದರು.

ದರ ಪರಿಷ್ಕರಣೆ ಮಾಡುವ ಪ್ರಸ್ತಾವನೆಗೆ ಸಂಪೂರ್ಣ ಬೆಂಬಲ ನೀಡುವಂತೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ ಮುಂದಿನ ದಿನಗಳಲ್ಲಿ ಈ ಸಂಬಂಧ ಸಭೆ ನಡೆಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Vijayaprabha Mobile App free

ಜಲಮಂಡಳಿ ನೌಕರರು, ಸಿಬ್ಬಂದಿಗಳ ವೇತನ ಹೆಚ್ಚಳವಾಗಿದೆ. ಜಲಮಂಡಳಿಗೆ ಪ್ರತಿ ತಿಂಗಳು 81 ಕೋಟಿ ಹೊರೆಯಾಗುತ್ತಿದೆ, ಆದ್ದರಿಂದ ನೀರಿನ ದರ ಹೆಚ್ಚಳ ಮಾಡಲು ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.