Banglore Techie: ಟೆಕ್ಕಿ ಆತ್ಮಹತ್ಯೆ ಪ್ರಕರಣ: ಮೃತನ ಪತ್ನಿ, ಅತ್ತೆ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಪತ್ನಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಅತುಲ್ ಪತ್ನಿ ಹಾಗೂ ಅತ್ತೆ ಸೇರಿದಂತೆ ಮೂವರು ಆರೋಪಿಗಳನ್ನು ಮಾರತಹಳ್ಳಿ…

ಬೆಂಗಳೂರು: ಪತ್ನಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಅತುಲ್ ಪತ್ನಿ ಹಾಗೂ ಅತ್ತೆ ಸೇರಿದಂತೆ ಮೂವರು ಆರೋಪಿಗಳನ್ನು ಮಾರತಹಳ್ಳಿ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಪೊಲೀಸರು ನಿನ್ನೆ ಬೆಳಿಗ್ಗೆ ಮೂವರನ್ನು ಬಂಧಿಸಿದ್ದು ರಾತ್ರಿ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಮೂವರೂ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪತ್ನಿಯ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ್ ಸುಮಾರು 24 ಪುಟಗಳಷ್ಟು ಡೆತ್‌ನೋಟ್ ಬರೆದಿದ್ದು, ಅದರಲ್ಲಿ ಪತ್ನಿ ಕಿರುಕುಳದ ಬಗ್ಗೆ ಉಲ್ಲೇಖಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾನಿಯ, ನೀಶಾ, ಹಾಗೂ ಅನುರಾಗ್ ಸಿಂಘಾನಿಯ ಅವರನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಪ್ರಕರಣ ಹಿನ್ನೆಲೆ: ಕಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ ಸೂಸೈಡ್ ಮಾಡಿಕೊಂಡಿದ್ದರು. ಅವರು ಸೂಸೈಡ್‌ಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ. ಮತ್ತು 90 ನಿಮಿಷದ ವಿಡಿಯೋವನ್ನು ಮಾಡಿದ್ದರು‌. 

Vijayaprabha Mobile App free

ಈ ಹಿನ್ನೆಲೆ ಜೌನ್‌ಪುರದಲ್ಲಿರುವ ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೊಟೀಸ್ ಅಂಟಿಸಿ ಬಂದಿದ್ದರು. ಅದರಲ್ಲಿ ‘ನಿಮ್ಮನ್ನು ವಿಚಾರಣೆ ಮಾಡಲು ಸಮಂಜಸವಾದ ಆಧಾರಗಳಿವೆ. ಮೂರು ದಿನಗಳೊಳಗೆ ಬೆಂಗಳೂರಿನ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೀಗ ಪೊಲೀಸರು ಪತ್ನಿ ನಿಕಿತಾ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.