ಬೆಂಗಳೂರು: ಪತ್ನಿ ಕೇಸ್ ಹಾಕಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾರತ್ತಳ್ಳಿಯಲ್ಲಿ ನಡೆದಿದೆ.
ಅತುಲ್ ಸುಭಾಷ್ ಎಂಬುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತುಲ್ ಸುಭಾಷ್ ಉತ್ತರ ಪ್ರದೇಶ ಮೂಲದ ಯುವತಿಯನ್ನು ಮದುವೆಯಾಗಿದ್ದರು.
ಗಂಡ-ಹೆಂಡತಿನ ನಡುವೆ ಆಗಾಗ ಜಗಳ ಕೂಡ ನಡೆಯುತ್ತಿತ್ತು. ಹೆಂಡತಿ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಿಸಿದ್ದರು. ಈ ವಿಚಾರಕ್ಕೆ ಸುಭಾಷ್ ಮನನೊಂದಿದ್ದರು ಎನ್ನಲಾಗಿದೆ.
ಎನ್ ಜಿ ಒ ಗ್ರೂಪ್ ಗೆ ವಾಟ್ಸಾಪ್ ನಲ್ಲಿ ಕೆಲವು ವಿಷಯಗಳನ್ನು ಹಂಚಿಕೊಂಡು ಸುಭಾಷ್ ಸೂಸೈಡ್ ಮಾಡಿಕೊಂಡಿದ್ದಾರೆ. 40 ಪುಟಗಳ ಡೆತ್ ನೋಟ್ ಬರೆದಿಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.