ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ…

rain-vijayaprabha-news

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಕೆಲ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ ಭಾಗದಲ್ಲಿ 60 ಕಿ.ಮೀ. ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ ಜನತೆ ಎಚ್ಚರಿಕೆಯಿಂದ ಇದ್ದು, ಈ ಅವಧಿಯಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

Vijayaprabha Mobile App free

ಇನ್ನು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂಜಾನೆ ಚಳಿ ಹೆಚ್ಚಲಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನ ಇರಲಿದ್ದು,ನಂತರ ಸಂಜೆ ವೇಳೆಗೆ ತಂಪಾದ ವಾತಾವರಣದಿಂದ ಕೂಡಿರಲಿದೆ.

ಪ್ರಮುಖ ನಗರಗಳ ತಾಪಮಾನ:

ಬೆಂಗಳೂರು: 31-16, ಮಂಗಳೂರು: 31-21, ಶಿವಮೊಗ್ಗ: 33-16, ಬೆಳಗಾವಿ: 30-16, ಮೈಸೂರು: 32-17, ಚಾಮರಾಜನಗರ: 32-18, ಚಿಕ್ಕಬಳ್ಳಾಪುರ: 29-14, ಕೋಲಾರ: 31-16, ತುಮಕೂರು: 31-16, ದಾವಣಗೆರೆ: 33-16, ಚಿಕ್ಕಬಳ್ಳಾಪುರ: 29-17, ಕೋಲಾರ: 28-17, ಬೆಳಗಾವಿ: 30-16, ಮೈಸೂರು: 31-18, ಮಂಡ್ಯ: 31-18, ರಾಮನಗರ: 30-18, ಹಾಸನ: 29-17, ಚಾಮರಾಜನಗರ: 30-19, ತುಮಕೂರು: 30-17 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.