ಬೆಂಗಳೂರು: ಏಪ್ರಿಲ್ 7ರಂದು ನಡೆಯಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಇಂದು ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.
ಸಯ್ಯದ್ ಯೆಸ್ರಬ್ ಅಲಿ ಖಾದ್ರಿ ಅವರಿಗೆ ಬಸವಕಲ್ಯಾಣದ ಟಿಕೆಟ್ ನೀಡಲಾಗಿದ್ದು, ನಾಳೆ ಬೆಳಗಾವಿ, ಮಸ್ಕಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯದ 1 ಲೋಕಸಭಾ & 2 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 7ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಇನ್ನು ಬಸವಕಲ್ಯಾಣದಲ್ಲಿ ನಮ್ಮ ಪಕ್ಷ 7 ಬಾರಿ ಗೆದ್ದಿದ್ದು, ಈ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆಯಾಗಿದೆ ಎಂದು ಹೇಳಿದ್ದಾರೆ. ನಾರಾಯಣ ರಾವ್ ನಿಧನ ಹಿನ್ನೆಲೆ ಬಸವಕಲ್ಯಾಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.