ಬೆಂಗಳೂರು: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ಸಿಎಂ ಆಗಿ ಆಯ್ಕೆ ಆಗಿದ್ದು, ನಾಳೆ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೌದು, ಸಿಎಂ ಅಭ್ಯರ್ಥಿಯ ಪೈಪೋಟಿಯಲ್ಲಿ ಶಿಗ್ಗಾವಿ ಶಾಸಕ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆ ಆಗಿದ್ದು, ಈಗಾಗಲೇ ವರಿಷ್ಠರು ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಸ್ & ರಾಜಭವನದ ಸಿಬ್ಬಂದಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನು, ಉಸ್ತುವಾರಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮದೇ ಲಿಂಗಾಯತ ಸಮುದಾಯದ ಬೊಮ್ಮಾಯಿ ಅವರನ್ನೇ ಸಿಎಂ ಮಾಡಿ ಎಂದು ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಇದರ ಪರಿಣಾಮ ಇಂದು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆ (ಬಿಎಲ್ಪಿ ಸಭೆ)ಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯದ ನೂತನ ಸಿಎಂ ಆಯ್ಕೆ ಮಾಡಲಾಗಿದೆ.
ಬಸವರಾಜ್ ಬೊಮ್ಮಾಯಿ ಅವರು ಮಾಜಿ ಸಿಎಂ ಎಸ್.ಆರ್.ಬೊಮ್ಮಾಯಿ ಅವರ ಪುತ್ರರಾಗಿದ್ದು, ಇವರು ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಸಂಸದೀಯ ಸಚಿವರಾಗಿದ್ದರು.