ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಅವರು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ನಜೀರ್ ಅಹ್ಮದ್ ಅವರು ಅಭ್ಯರ್ಥಿಯಾಗಿದ್ದರು. ಆದರೆ ಕೊನೆಯ ಹಂತದಲ್ಲಿ ನಜೀರ್ ಅಹ್ಮದ್ ಅವರು ಕಣದಿಂದ ಹಿಂದೆ ಸರಿದ ಹಿನ್ನೆಲೆ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.