ಬೆಂಗಳೂರು: ವಿಧಾನ ಪರಿಷತ್ ನ ನೂತನ ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಜಾತ್ಯಾತೀತ ಜನತಾದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು, ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ ಅವರಿಗೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಈ ಸ್ಥಾನಕ್ಕೆ ಹೊರಟ್ಟಿ ಸ್ಪರ್ಧಿಸಿದ್ದರು. ಜೆಡಿಎಸ್ ಅನ್ನು ಬಿಜೆಪಿ ಬೆಂಬಲಿಸಿದ್ದ ಕಾರಣ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.
JDS ನಿಂದ ಹೊರಬಂದ ಹೊರಟ್ಟಿ
ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಸಭಾಪತಿಗಳು ಪಕ್ಷಾತೀತವಾಗಿ ಕಾರ್ಯ ನಿರ್ವಹಣೆ ಮಾಡಬೇಕು. ಹಾಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡಗೆ ಅವರಿಗೆ ಹೊರಟ್ಟಿ ಕಳುಹಿಸಿದ್ದಾರೆ.