ಬೆಳಗಾವಿ: ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ತಮ್ಮ ಮಠದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು, ಬೈಲಹೊಂಗಳ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ, ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್ ಆಗಿದೆ. ಅದರಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ದಲಿಂಗ ಸ್ವಾಮಿಯ ಹೆಸರು ಪ್ರಸ್ತಾಪಿಸಿರುವುದೇ ಈ ಆತ್ಮಹತ್ಯಗೆ ಕಾರಣ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.