ಬೆಂಗಳೂರು: PGಗಳಿಗೆ ಬಿಬಿಎಂಪಿ ಎಚ್ಚರಿಕೆ, ಹೊಸ ಮಾರ್ಗಸೂಚಿ ಜಾರಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ‘ಪೇಯಿಂಗ್ ಗೆಸ್ಟ್’ಗಳಲ್ಲಿ ಇತ್ತೀಚಿಗೆ ಕೆಲವು ಅಹಿತಕರ ಘಟನೆಗಳು ನಡೆದಿದ್ದು, ಅಲರ್ಟ್ ಆಗಿರುವ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಬರುವ ಪಿಜಿ ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗೂ ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು, ಮಾಡದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆಯಡಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ “ಪೇಯಿಂಗ್ ಗೆಸ್ಟ್’ (PGs)ಗಳಿಗೆ ‘ಪರವಾನಿಗೆ ಮಂಜೂರಾತಿ’/’ನವೀಕರಣ’ ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್ ಗೆಸ್ಟ್‌ಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

1. ಪಿಜಿ ಗಳಲ್ಲಿನ ಎಲ್ಲಾ ಪ್ರವೇಶ/ನಿರ್ಗಮನ ದ್ವಾರದಲ್ಲಿ ಸಿ.ಸಿ. ಟಿ.ವಿ. ಕಡ್ಡಾಯ ಹಾಗೂ ಪ್ರತಿಯೊಂದು ಸಿ.ಸಿ ಟಿ.ವಿ. ಕ್ಯಾಮರಾದ ವೀಡಿಯೋ ಮತ್ತು ಫೋಟೇಜ್‌ಗಳನ್ನು 90 ದಿನಗಳವರೆಗೆ ಹಾರ್ಡ್‌ ವೇರ್ & ಸಾಫ್ಟ್‌ವೇರ್ ಬ್ಯಾಕಪ್ ಸ್ಟೋರೆಜ್‌ನ್ನು ಸಂರಕ್ಷಿಸಬೇಕು.

Advertisement

2. ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪೇಯಿಂಗ್ ಗೆಸ್ಟ್‌ಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡತಕ್ಕದ್ದು.

3. ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಿರತಕ್ಕದ್ದು.

4. ಪೇಯಿಂಗ್ ಗೆಸ್ಟ್‌ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರತಕ್ಕದ್ದು. ಪ್ರತಿಯೊಬ್ಬ ವಾಸಿಗೆ 135 LPCD ನೀರಿನ ಲಭ್ಯತೆ ಇರುವುದನ್ನು ಮಾಲೀಕರು/ಉದ್ದಿಮೆದಾರರು ಖಚಿತಪಡಿಸಿಕೊಳ್ಳತಕ್ಕದ್ದು.

5. ಪೇಯಿಂಗ್ ಗೆಸ್ಟ್‌ ಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 03 ತಿಂಗಳ ಅವಧಿಯೊಳಗೆ ಕಡ್ಡಾಯವಾಗಿ FSSAI ಇಲಾಖೆಯಿಂದ ಲೈಸನ್ಸ್‌ನ್ನು ಪಡೆದುಕೊಳ್ಳತಕ್ಕದ್ದು.

6. ಉದ್ದಿಮೆದಾರರು/ಮಾಲೀಕರು ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಟ ಪಕ್ಷ 01 ಸಿಬ್ಬಂದಿಯನ್ನಾದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸಿರತಕ್ಕದ್ದು.

7. ಪೇಯಿಂಗ್ ಗೆಸ್ಟ್ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಿಗೆ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲೀಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಆಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರವನ್ನು ಪಡೆದುಕೊಂಡಿರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.

8. ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ-1533 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ:101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಟ್ಟಿದ್ದು.

9. ಪೇಯಿಂಗ್ ಗೆಸ್ಟ್‌ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ(First Aid Kits)ಗಳನ್ನು ಆಳವಡಿಸಿರತಕ್ಕದ್ದು.

10. ಪೇಯಿಂಗ್ ಗೆಸ್ಟ್‌ನ ಮಾಲೀಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿಗೊಳಸಲು ಕ್ರಮವಹಿಸತಕ್ಕದ್ದು. ಎಲ್ಲಾ ವಲಯ ಆಯುಕ್ತರುಗಳು ಮೇಲ್ಕಂಡ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವುದರ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಳ್ಳತಕ್ಕದ್ದು ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಉದ್ದಿಮೆದಾರರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-2020ರ ಕಾಯ್ದೆ ಸೆಕ್ಷನ್ 307 & 308ರಂತೆ ಅಗತ್ಯ ಕ್ರಮ ಜರುಗಿಸಲು ಮುಖ್ಯ ಆಯುಕ್ತರು ಸೂಚಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು