ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ: ಡಾ.ಜಿ.ಪರಮೇಶ್ವ‌ರ್

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ದತೆಗಳು ಜೋರಾಗಿವೆ. ಈ ನಡುವೆ ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ದತೆಗಳು ಜೋರಾಗಿವೆ. ಈ ನಡುವೆ ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಣೆ ಮಾಡಬೇಕು. ಬೆಂಗಳೂರಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲಿಯೂ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ಹೊಸ ವರ್ಷಾಚರಣೆ ಮಾಡಬೇಕು. ಹೋಟೆಲ್, ರೆಸ್ಟೋರೆಂಟ್, ಪಬ್, ಬಾರ್ ಗಳು ಎಂದಿನಂತೆ ರಾತ್ರಿ 1 ಗಂಟೆಯವರೆಗೆ ತೆರೆದಿರುತ್ತದೆ. ನಗರದೆಲ್ಲೆಡೆ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.