ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಆಕ್ಸಿಜನ್ ಹಾಹಾಕಾರ ಶುರುವಾಗಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆ ಬಂದಿರುವ ಸಂಗತಿ ನಿಜಕ್ಕೂ ಶಾಕ್ ನೀಡುವಂತಹ ಸಂಗತಿಯಾಗಿದ್ದು, ಈ ದಂಧೆ ಹಿಂದೆ ಯಾವುದೋ ಮುಸ್ಲಿಂ ಸಂಘಟನೆಯೇ ಇದೆಯೇ ಎಂಬ ಅನುಮಾನವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಆ ದಂಧೆಯಲ್ಲಿ ಅತೀ ಹೆಚ್ಚಾಗಿ ಮುಸ್ಲಿಂ ಸಮೂದಾಯದವರೇ ಎಂದು ಹೇಳಿದ್ದು, ರಾಜ್ಯದಲ್ಲಿ ನಾವು ಹಾಗೋ ಹೀಗೋ ಕೋವಿಡ್ ಮ್ಯಾನೇಜ್ ಮಾಡುತ್ತಿದ್ದೇವೆ. ಆದರೆ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೆಲವು ವ್ಯಕ್ತಿಗಳು ಹೀಗೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಈ ವಿಚಾರವನ್ನು ಸಂಸದ ತೇಜಸ್ವಿ ಸೂರ್ಯ, ಸತೀಶ್ ರೆಡ್ಡಿ ಸೇರಿದಂತೆ ಹಲವಾರು ಹೊರಗೆ ತಂದಿದ್ದು, ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆಯ ನಂತರ ಹೊರಗೆ ಬರಲಿದೆ. ಅದರ ಹಿಂದಿರುವ ಸಂಘಟನೆ, ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದು, ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಈ ಬಗ್ಗೆ ಎಚ್ಚರಿಕೆಯಿಂದ ಇರುತ್ತೇವೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.