ಬಿಹಾರ: ಕೊವಿಡ್ ಮೂರನೆ ಅಲೆ ಮಕ್ಕಳ ಮೇಲೆ ಮೇಲೆ ಪರಿಣಾಮ ಬೀರಲಿದೆ ಎಂಬ ತಜ್ಞರ ವರದಿಯ ಆತಂಕ ನಡುವೆಯೆ ಒಂದು ಸಂತೋಷ ಸಮಾಚಾರ ಹೊರಬಿದ್ದಿದ್ದು, ಭಾರತ್ ಬಯೋಟೆಕ್ ಸಿದ್ಧಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ಇದೇ ಮೊದಲ ಬಾರಿಗೆ ಪಾಟ್ನಾದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಮಕ್ಕಳ ಮೇಲೆ ಪ್ರಯೋಗವನ್ನು ಆರಂಭಿಸಿದೆ.
ಹೌದು ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಮೇ.11 ರಂದು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಬಳಕೆ ಕುರಿತ 2 ಮತ್ತು 3ನೇ ಹಂತದ ಪ್ರಯೋಗಕ್ಕೆ ಅನುಮತಿ ನೀಡಿದ್ದು, ನೀತಿ ಆಯೋಗದ ಸದಸ್ಯ ಹಾಗೂ ರಾಷ್ಟ್ರೀಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ವಿಕೆ ಪೌಲ್ ಅವರು ಈ ಹಿಂದೆ ಹೇಳಿಕೆ ನೀಡಿ, 2 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಕೋವಾಕ್ಸಿನ್ ಲಸಿಕೆಯನ್ನು ಬಳಸಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದಿಸಿದೆ ಎಂದು ಹೇಳಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment