ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ನದಿಯಲ್ಲಿ ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ನಡೆದಿದೆ. ತಂದೆ ಲಕ್ಷ್ಮಣ ರಾಮಾ ಅಂಬಲಿ(46), ಮಕ್ಕಳಾದ ರಮೇಶ(15), ಯಲ್ಲಪ್ಪ(13) ನಾಪತ್ತೆಯಾದವರು.
ಬೆನಕನಹೊಳಿ ಗ್ರಾಮದ ಲಕ್ಷ್ಮಣ ಮೀನುಗಾರಿಕೆ ಕಸುಬು ಮಾಡಿಕೊಂಡಿದ್ದರು. ಸೋಮವಾರ ಸಂಜೆ ಲಕ್ಷ್ಮಣ ತಮ್ಮ ಇಬ್ಬರು ಮಕ್ಕಳೊಟ್ಟಿಗೆ ಮೀನು ಹಿಡಿಯಲು ಘಟಪ್ರಭಾ ನದಿಗೆ ಹೋಗಿದ್ದರು. ಈ ವೇಳೆ ಮೂವರೂ ಸಹ ನದಿಯಲ್ಲಿ ನಾಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಬೋಟ ಮೂಲಕ ಶೋಧ ಕಾರ್ಯ ನಡೆಸಿದ್ದು, ಇದುವರೆಗೂ ಸಹ ಮೂವರ ಕುರಿತು ಸುಳಿವು ಪತ್ತೆಯಾಗಿಲ್ಲ. ಘಟನೆ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment