ಬೆಳಗಾವಿ Suvarna Soudha ದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ: ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಜಿಲ್ಲಾಡಳಿತದಿಂದ ಕೊಂಡಸಕೊಪ್ಪ ಸಮೀಪ ನಿರ್ಮಿಸಿದ ಟೆಂಟ್ ನಲ್ಲಿ ಮೂರು ಮತ್ತು ಸುವರ್ಣ ಗಾರ್ಡನ್ ಟೆಂಟ್ ಗಳಲ್ಲಿ…

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ.

ಜಿಲ್ಲಾಡಳಿತದಿಂದ ಕೊಂಡಸಕೊಪ್ಪ ಸಮೀಪ ನಿರ್ಮಿಸಿದ ಟೆಂಟ್ ನಲ್ಲಿ ಮೂರು ಮತ್ತು ಸುವರ್ಣ ಗಾರ್ಡನ್ ಟೆಂಟ್ ಗಳಲ್ಲಿ ಎಂಟು ಸಂಘಟನೆಗಳಿಂದ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಕಬ್ಬಿನ ದರ ನಿಗದಿ, ಮಲಪ್ರಭಾ ನದಿ ಏತ ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಮೂರು ರೈತ ಪರ ಸಂಘಟನೆಗಳಿಂದ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Vijayaprabha Mobile App free

ಸಾಮಾಜಿಕ ಕಾರ್ಯಕರ್ತ ಮಂಜುನಾಥ ಬನಶಂಕರಿ, ಕೆಎಸ್‌ಆರ್‌ಟಿಸಿ ನಿಗಮದ ಲೇಬರ್ ಅಸೋಸಿಯೇಷನ್ ಜಂಟಿ ಕ್ರಿಯಾ ಸಮಿತಿ, ಮುಂಡರಗಿ ತಾಲೂಕು ಫೋರಂ, ಅಕ್ಕ ಫೌಂಡೇಶನ್ ಟ್ರಸ್ಟ್, ಹುಬ್ಬಳ್ಳಿ-ಧಾರವಾಡ ವಾರ್ಡ್ ಸಮಿತಿ ಬಳಗ, ಅಖಂಡ ಕರ್ನಾಟಕ ಹೂಗಾರ ಮಹಾಸಭಾ, ಕರ್ನಾಟಕ ರಾಜ್ಯ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಬಿಬಿಎಂಪಿ ಲೈಬ್ರರಿ ಸೂಪರ್ ರೀಡರ್ಸ್ ವತಿಯಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.