Belekeri Ore Missing Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರಿಂದ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ಮತ್ತು ದಂಡದ ತೀರ್ಪನ್ನು ರದ್ದುಗೊಳಿಸುವಂತೆ ಕೋರಿ ಕಾರವಾರ ಶಾಸಕ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್,…

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ಮತ್ತು ದಂಡದ ತೀರ್ಪನ್ನು ರದ್ದುಗೊಳಿಸುವಂತೆ ಕೋರಿ ಕಾರವಾರ ಶಾಸಕ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆ.ವಿ.ಎನ್.ಗೋವಿಂದರಾಜ್ ಮತ್ತು ಚೇತನ್ ಶಾ ಸಲ್ಲಿಸಿರುವ ಅವರ ಅರ್ಜಿಗಳಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ನಾಲ್ವರೂ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ- ಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.

ಮೆಸರ್ಸ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ ಲಿಮಿಟೆಡ್ ಮತ್ತು ಅದರ ಮಾಲೀಕ ಸತೀಶ್ ಸೈಲ್ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಹಾಗೂ ಆಶಾಪುರ ಮೈನೆಛಿಮ್ ಲಿಮಿಟೆಡ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. 

Vijayaprabha Mobile App free

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ಸಿ.ವಿ.ನಾಗೇಶ್ ಮತ್ತು ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ರವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ಅಂತಿಮವಾಗಿ ಪೀಠವು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇತರ 2 ಪ್ರಕರಣಗಳನ್ನು ನ.13ಕ್ಕೆ ವಿಚಾರಣೆಗೆ ನಿಗದಿಪಡಿಸಲಾಗಿದೆ. ಹೀಗಾಗಿ ಅಂದು ಎಲ್ಲಾ ಪ್ರಕರಣದಲ್ಲಿ ಆದೇಶ ಮಾಡಲಾಗುವುದು ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.