ವಿಜಯನಗರ: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಆ.31ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಿ

ಹೊಸಪೇಟೆ(ವಿಜಯನಗರ),ಆ.18: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಆ.31ರೊಳಗಾಗಿ ಕಡ್ಡಾಯವಾಗಿ ಇ-ಕೆವೈಸಿ (e-KYC) ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.xn--in-muh8o/ ಭೇಟಿ…

farmer vijayaprabha news1

ಹೊಸಪೇಟೆ(ವಿಜಯನಗರ),ಆ.18: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಆ.31ರೊಳಗಾಗಿ ಕಡ್ಡಾಯವಾಗಿ ಇ-ಕೆವೈಸಿ (e-KYC) ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.xn--in-muh8o/ ಭೇಟಿ ನೀಡಿ ಇ-ಕೆವೈಸಿ (e-KYC) ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್‍ಗೆ ಲಿಂಕ್‍ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು, ಮೊಬೈಲ್ ಸಂಖ್ಯೆ ಬರುವ ಓ.ಟಿ.ಪಿ ನಮೂದಿಸಿ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಬೇಕು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒ.ಟಿ.ಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮಒನ್ ಸೇವಾ ಕೇಂದ್ರಕ್ಕೆ ಅಥವಾ ಸೈಬರ್ ಕಫೆಗಳಿಗೆ ನಿಗದಿತ ಶುಲ್ಕ ಪಾವತಿಸಿ ಇ-ಕೆವೈಸಿ (e-KYC) ಮಾಡಿಕೊಳ್ಳಬೇಕು.

ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳು ಆ.31ರೊಳಗೆ ಇ-ಕೆವೈಸಿ (e-KYC) ಮಾಡಿಸಬೇಕು. ಈ ಇ-ಕೆವೈಸಿ (e-KYC) ಮಾಡಿಸದಿರುವ ರೈತರಿಗೆ ಮುಂದಿನ ಕಂತಿನ ಅನುದಾನ ವರ್ಗಾವಣೆಯಾಗುವುದಿಲ್ಲ. ಆದರಿಂದ ಎಲ್ಲಾ ರೈತರು ಇ-ಕೆವೈಸಿ (e-KYC) ಮಾಡಿಸಬೇಕು.

Vijayaprabha Mobile App free

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ/ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.