ಶಿವಮೊಗ್ಗ: ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುವವರು ಎಚ್ಚರಿಕೆ ವಹಿಸಬೇಕಿದೆ. ಯಾಕೆಂದರೆ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳಿಂದ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಶಿವಮೊಗ್ಗ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಮದ್ಯಪಾನ ಮಾಡಿ ಬೈಕ್ ಚಲಾಯಿಸುತ್ತಿದ್ದ ಸವಾರನಿಗೆ ಟ್ರಾಫಿಕ್ ಪೊಲೀಸರು ಭಾರೀ ಮೊತ್ತದ ದಂಡ ವಿಧಿಸಿ ಶಾಕ್ ನೀಡಿದ್ದಾರೆ.
ಇಂತಹದ್ದೊಂದು ಘಟನೆ ನಡೆದಿರುವುದು ಭದ್ರಾವತಿಯಲ್ಲಿ. ಪಟ್ಟದಲ್ಲಿ ಬುಧವಾರ ಸಂಜೆ ಸಂಚಾರಿ ಠಾಣಾ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಅದೇ ರಸ್ತೆಯಲ್ಲಿ ವ್ಯಕ್ತಿಯೋರ್ವ ಬೈಕ್ ಚಲಾಯಿಸಿಕೊಂಡು ಬಂದಿದ್ದು, ಆತನನ್ನು ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಸವಾರ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ.
ಕೂಡಲೇ ಟ್ರಾಫಿಕ್ ಠಾಣೆಯ ಇನ್ಸ್‌ಪೆಕ್ಟರ್ ಬೈಕ್ ಸವಾರನಿಗೆ ದಂಡ ವಿಧಿಸಿ ರಶೀದಿ ನೀಡಿದ್ದು ಸವಾರ ದಂಡದ ಮೊತ್ತ ನೋಡಿ ಶಾಕ್‌ಗೆ ಒಳಗಾಗಿದ್ದಾನೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪರಿಣಾಮ ಬೈಕ್ ಸವಾರನಿಗೆ ಸಂಚಾರಿ ಪೊಲೀಸರು ಬರೋಬ್ಬರಿ 10 ಸಾವಿರ ದಂಡ ವಿಧಿಸಿದ್ದು ಮದ್ಯಪಾನ ಮಾಡಿದ್ದವನ ನಶೆಯನ್ನೇ ಇಳಿಸಿದೆ.