ಭಟ್ಕಳ: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯನ್ನು ಬಲೆಗೆ ಬೀಳಿಸಿದ ಘಟನೆ ಭಟ್ಕಳ ಪುರಸಭೆಯಲ್ಲಿ ನಡೆದಿದೆ. ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
ಅಧಿಕಾರಿ ನೀಲಕಂಠ ಮೇಸ್ತಾ ಒಳಚರಂಡಿ ಸಂಪರ್ಕ ಕಲ್ಪಿಸಿಕೊಡಲು ವ್ಯಕ್ತಿಯೋರ್ವರಿಂದ 50 ಸಾವಿರ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಶುಕ್ರವಾರ ಪುರಸಭೆ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,ಈ ವೇಳೆ ಲಂಚ ಪಡೆಯುತ್ತಿದ್ದ ಅಧಿಕಾರಿ ನೀಲಕಂಠ ಮೇಸ್ತಾನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದು, ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.