ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಗೆ ಈಡೇರಿಕೆಗೆ ಸರ್ಕಾರ ಅಸ್ತು ಎಂದಿದ್ದು, 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದು, ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಈ ಬಗ್ಗೆ ನಿನ್ನೆ ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಈಗಾಗಲೇ 7ನೇ ವೇತನ ಆಯೋಗ ರಚಿಸಲಾಗಿದ್ದು, ಆಯೋಗದ ಶಿಫಾರಸ್ಸು ಆಧಿರಿಸಿ ಮುಂದಿನ ಕ್ರಮ ವಹಿಸಲಿದ್ದೇವೆ ಎಂದು ಹೇಳಿದ್ದಾರೆ.
ಇನ್ನು, 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಈ ವೇಳೆ ಸಿಎಂ ಈ ಘೋಷಣೆ ಮಾಡಿರುವುದು ನೌಕರರ ಖುಷಿಗೆ ಕಾರಣವಾಗಿದೆ. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ನೌಕರರ ಪರ ಬ್ಯಾಟ್ ಬೀಸಿದ್ದರು.