ಬೆಂಗಳೂರು : ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಪಾತ್ರ ಇಲ್ಲ ಎಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿದು ಡಿವೈಎಸ್’ಪಿ ಗಣಪತಿ ಸಹೋದರಿ ಮೇಲ್ಮನವಿಯನ್ನು ವಜಾಗೊಳಿಸಿದೆ. ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment