ಬೆಂಗಳೂರು: ಆರ್ಥಿಕತೆಯ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಮುಂದಿನ ಬಜೆಟ್ ನಲ್ಲಿ ಮದ್ಯದ ಬೆಲೆ ಹೆಚ್ಚಿಸಲು ಆಲೋಚಿಸಿದ್ದು, ಇಂಡಿಯನ್ ಮೇಡ್ ಲಿಕ್ಕರ್ ಮತ್ತು ಬಿಯರ್ ಮೇಲೆ 5 ರಿಂದ 10% ವರೆಗೆ ಅಬಕಾರಿ ಸುಂಕ ವಿಧಿಸಲು ನಿರ್ಣಯಿಸಲಾಗಿದೆ ಎನ್ನಲಾಗಿದೆ.
ಫೆಬ್ರುವರಿ 25ಕ್ಕೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಯಲಿದ್ದು, ಅಲ್ಲಿ ಅಧಿಕಾರಿಗಳ ಜತೆ ಚರ್ಚಿಸಿ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಕಳೆದ ವರ್ಷ 17% ಅಬಕಾರಿ ಸುಂಕ ಹೆಚ್ಚಿಸಿದ ಕಾರಣ ಬಜೆಟ್ ನಲ್ಲಿ ಮದ್ಯ ದರ ಏರಿಕೆ ಮಾಡಿರಲಿಲ್ಲ.
ಆದರೆ ಬರುವ ಬಜೆಟ್ ನಲ್ಲಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಿಸಲು ನಿರ್ಧರಿಸಿರುವ ಸರ್ಕಾರದ ನಿರ್ಧಾರದಿಂದ ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಬರೆ ಬಿಂದಾತಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.