ಬೆಂಗಳೂರು : ಸಾರಿಗೆ ನೌಕರರು ತಮ್ಮ ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.
ಈ ಮಧ್ಯೆ ರಾಜ್ಯ ಸರ್ಕಾರವು ಮುಷ್ಕರನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದ್ದು, ಬಿಎಂಟಿಸಿಯ ಶನಿವಾರವೊಂದೇ ದಿನ 2443 ನೌಕರರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನೌಕರರು ನಡೆಸುತ್ತಿರುವ ಕಾನೂನು ಬಾಹಿರ ಮುಷ್ಕರದಲ್ಲಿ ಭಾಗವಹಿಸಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರುರಾಗಿದ್ದು, ಹಾಗೂ ಕರ್ತವ್ಯಕ್ಕೆ ಹಾಜರಾಗದಂತೆ ಸಹ ನೌಕರರಿಗೆ ಪ್ರಚೋದಿಸಿರುತ್ತಾರೆ, ಆ ಕಾರಣದಿಂದ ನಿಗಮ ಸೂಚಿಸಿದರೂ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದ್ದು, ಸೂಕ್ತ ಕಾರಣ ನೀಡದಿದ್ದಲ್ಲಿ ವಜಾಗೊಳಿಸುವುದಾಗಿ ಬಿಎಂಟಿಸಿ ತಿಳಿಸಿದೆ.
ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 12ನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೆ ಬಿಎಂಟಿಸಿಯು 3 ಸಾವಿರಕ್ಕೂ ಹೆಚ್ಚು ಸಾರಿಗೆ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.