ಜಿಯೋದಿಂದ ಭರ್ಜರಿ ಸಿಹಿಸುದ್ದಿ: ಮಧ್ಯಾಹ್ನ 2 ಗಂಟೆಗೆ ಪ್ರಮುಖ ಘೋಷಣೆ..?

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್ (RIL) ತನ್ನ 45ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ನಡೆಸುತ್ತಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಈ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್…

Mukesh Ambani vijayaprabha news

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್ (RIL) ತನ್ನ 45ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ನಡೆಸುತ್ತಿದೆ.

ಮಧ್ಯಾಹ್ನ 2 ಗಂಟೆಗೆ ನಡೆಯುವ ಈ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹಲವು ಪ್ರಮುಖ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದ್ದು, Jio 5G ಸೇವೆ, Jio Phone 5G ಅನ್ನು ಅನಾವರಣಗೊಳಿಸಬಹುದು.

ಜೊತೆಗೆ ಕೈಗೆಟುಕುವ ದರದಲ್ಲಿ ಬಿಡುಗಡೆ ಮಾಡಲಿರುವ ಲ್ಯಾಪ್‌ಟಾಪ್‌ (ಜಿಯೋಬುಕ್) ಬಗ್ಗೆಯೂ ಮಾಹಿತಿ ನೀಡಬಹುದು ಎನ್ನಲಾಗಿದ್ದು, ಜಿಯೋ ಫೋನ್ 10,000 ರೂ. ಗಿಂತ ಕಡಿಮೆ ಬೆಲೆ, 4GB RAM ಮತ್ತು 32GB ಸಂಗ್ರಹ ಸಾಮರ್ಥ್ಯ ಹೊಂದಿದೆ ಎಂದು ಅಂದಾಜಿಸಲಾಗಿದೆ.

Vijayaprabha Mobile App free

ಅಷ್ಟೇ ಅಲ್ಲ, ಗ್ರೀನ್ ಎನರ್ಜಿ, ಐಪಿಒ, ಗಿಗಾ ಫ್ಯಾಕ್ಟರಿ, ಜಿಯೋ ಟ್ಯಾಗ್ ಸೇರಿದಂತೆ ಏನೆಲ್ಲಾ ಘೋಷಣೆ ಮಾಡಬಹುದು ಎಂದು ಪ್ರತಿಯೊಬ್ಬರೂ ಕುತೂಹಲದಿಂದ ಕಾಯುತ್ತಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.