ಹರಪನಹಳ್ಳಿ: ಆರ್ ಟಿಐ ಕಾರ್ಯಕರ್ತ ಟಿ.ಶ್ರೀಧರ್ ಅವರ ಹತ್ಯೆ ಬೆನ್ನಲ್ಲೇ ಅವರ ಪತ್ನಿ ಶಿಲ್ಪಾ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪೊಲೀಸರಿಗೆ ನನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮಾಜಿ ಸಚಿವ, ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರ ಆಪ್ತ ಹೆಚ್.ಕೆ.ಹಾಲೇಶ್ ನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಇನ್ನು ಹಾಲೇಶ್ ಬಂಧನ ಬೆನ್ನಲ್ಲೇ ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ಅವರ ಪುತ್ರ ಪಿ.ಟಿ.ಭರತ್ ನಾಯ್ಕ್ ತಲೆಮರೆಸಿಕೊಂಡಿದ್ದು, ಫೋನ್ ಸ್ವಿಟ್ಚ್ ಆಫ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಜುಲೈ 15ರಂದು ಆರ್ ಟಿಐ ಕಾರ್ಯಕರ್ತ ಟಿ. ಶ್ರೀಧರ್ ಅವರನ್ನು ರಾಡ್ ನಿಂದ ಹೊಡೆದು ಹತ್ಯೆ ಮಾಡಲಾಗಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.