ಬೆಂಗಳೂರು: ಗೋಕಾಕ್ ಬಿಜೆಪಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಇಂದು ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.
ಹೌದು, ಅರ್ಜಿಯಲ್ಲಿ ಎಸ್ಐಟಿ ತನಿಖೆಯನ್ನು ರದ್ದುಗೊಳಿಸಬೇಕು. ಅಲ್ಲದೆ ಸಮಗ್ರ ತನಿಖೆಗಾಗಿ ಬೇರೊಂದು ತನಿಖಾ ತಂಡವನ್ನು ನೇಮಿಸಬೇಕೆಂದು ಸಂತ್ರಸ್ತ ಯುವತಿ ಹೈಕೋರ್ಟ್ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾಳೆ.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಇಂದು ಎಸ್ಐಟಿ, ರಾಜ್ಯ ಸರ್ಕಾರ ಮತ್ತು ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.