ಬೆಂಗಳೂರು: ಇಂದು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ಹಾಗೂ ಜನನಾಯಕ ಅಟಲ್ ಬಿಹಾರಿ ವಾಜಪೇಯಿಯವರ ಹುಟ್ಟುಹಬ್ಬ.
ಅಟಲ್ ಬಿಹಾರಿ ವಾಜಪೇಯಿಯವರು ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿದ್ದರು. ಇದಕ್ಕೂ ಮುಂಚೆ ವಾಜಪೇಯಿ ಅವರು ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಇಷ್ಟೆಲ್ಲಾ ಸಾಧನೆ ಮಾಡಿರುವ ಅಜಾತ ಶತ್ರು ವಾಜಪೇಯಿಯವರ ಜನ್ಮದಿನದ ಅಂಗವಾಗಿ ಅರೋಗ್ಯ ಸಚಿವ ಕೆ ಸುಧಾಕರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರಣ್ಯ ಸಚಿವ ಆನಂದ್ ಸಿಂಗ್, ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸೇರಿದಂತೆ ಗಣ್ಯರು ನಮನ ಸಲ್ಲಿಸಿದ್ದಾರೆ.