ಚಿತ್ರದುರ್ಗ : ಕೊರೋನಾ ಸೋಂಕಿನಲ್ಲಿಯೂ ಬಿಜೆಪಿ ಭ್ರಷ್ಟಾಚಾರ ಮಾಡಿದೆ, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂದು ಚಿತ್ರದುರ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಚಿತ್ರದುರ್ಗದ ವಿವಿಧ ಮಠಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಎಂಬ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿಗೆ ತಿರುಗೇಟು ನೀಡಿದ್ದಾರೆ. ‘ಕೊರೋನಾ ಬಿಕ್ಕಟ್ಟನ್ನು ರಾಜ್ಯ ಸರ್ಕಾರ ಭ್ರಷ್ಟಾಚಾರಕ್ಕೆ ಬಳಸಿಕೊಂಡಿದೆ. ಆಸ್ಪತ್ರೆಯ ಹಾಸಿಗೆ, ದಿಂಬು, ಔಷಧಿಯಲ್ಲಿ ವಿತರಣೆಯಲ್ಲೂ ಬಿಜೆಪಿಯವರು ಭಷ್ಟಾಚಾರ ಮಾಡಿದ್ದಾರೆ’ ಎಂದು ಕಿಡಿಕಾರಿದರು.
ಕೇಂದ್ರದ ಬಿಜೆಪಿ ಸರ್ಕಾರ ದೇಶಕ್ಕೆ ಕೆಟ್ಟ ಬಜೆಟ್ ನೀಡಿದ್ದು, ರೈತರು, ಕಾರ್ಮಿಕರು, ಸರ್ಕಾರಿ ನೌಕರರು ಸೇರಿದಂತೆ ಎಲ್ಲಾ ವರ್ಗಕ್ಕೆ ತೊಂದರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಇನ್ನು ಡೀಸೆಲ್, ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದು ಜನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೆಲೆ ಏರಿಕೆಯ ವಿರುದ್ದವೂ ನಾವು ಹೋರಾಟ ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.