ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದನ್ನು ಬಿಟ್ಟು ಬಿ.ಎಸ್ ಯಡಿಯೂರಪ್ಪ ಸರ್ಕಾರ ಹೊಸದಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿಮಾಡಿಲ್ಲ. ದುರಂತವೆಂದರೆ ನಮ್ಮ ಹಲವು ಕಾರ್ಯಕ್ರಮಗಳಿಗೂ ಅನುದಾನ ನೀಡದೆ ಇತಿಶ್ರೀ ಹಾಡಿದ್ದೇ ಬಿಜೆಪಿ ಕರ್ನಾಟಕ ಸರ್ಕಾರದ ಈವರೆಗಿನ ಸಾಧನೆ.
ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಬಿ.ಎಸ್ ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು?
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ.
ಕೆ.ಆರ್ ಪೇಟೆಯಲ್ಲಿ ಹಣ ಹಂಚಿದಂತೆ ಶಿರಾದಲ್ಲೂ ಬಿಜೆಪಿಯವರು ಮತದಾರರ ಮನೆಬಾಗಿಲಿಗೆ ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. ಈ ವಿಚಾರ ಪೊಲೀಸ್ ಇಲಾಖೆ, ಚುನಾವಣಾ ಆಯೋಗಕ್ಕೆ ಗೊತ್ತಿದ್ದರೂ ಅವುಗಳು ಕಣ್ಣುಮುಚ್ಚಿ ಕೂತಿರುವುದೇಕೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದನ್ನು ಬಿಟ್ಟು @BSYBJP ಸರ್ಕಾರ ಹೊಸದಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿಮಾಡಿಲ್ಲ. ದುರಂತವೆಂದರೆ ನಮ್ಮ ಹಲವು ಕಾರ್ಯಕ್ರಮಗಳಿಗೂ ಅನುದಾನ ನೀಡದೆ ಇತಿಶ್ರೀ ಹಾಡಿದ್ದೇ @BJP4Karnataka ಸರ್ಕಾರದ ಈ ವರೆಗಿನ ಸಾಧನೆ. 1/5#bypolls pic.twitter.com/DIESRG3WP3
— Siddaramaiah (@siddaramaiah) October 29, 2020