ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (63) ದೆಹಲಿಯ ತಮ್ಮ ನಿವಾಸದಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ರಾಮ್ ಸ್ವರೂಪ್ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು, ಸಂಸದ ರಾಮ್ ಸ್ವರೂಪ್ ಶರ್ಮಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಮನೆಗೆ ತೆರಳಿದಾಗ ಒಳಗಿನಿಂದ ಬಾಗಿಲು ಮುಚ್ಚಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ರಾಮ್ ಸ್ವರೂಪ್ ಶರ್ಮಾ ಅವರು ಚುನಾವಣಾ ರಾಜಕೀಯಕ್ಕೆ ಸೇರುವ ಮೊದಲು ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು. ಅವರು 2014 ಮತ್ತು 2019 ರಲ್ಲಿ ಎರಡು ಬಾರಿ ಮಂಡಿ ಲೋಕಸಭಾ ಸ್ಥಾನದಿಂದ ಗೆದ್ದಿದ್ದರು. ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲೂ ಸೇವೆ ಸಲ್ಲಿಸಿದರು. ರಾಮ್ ಸ್ವರೂಪ್ ಶರ್ಮಾ ಅವರಿಗೆ ಪತ್ನಿ ಮತ್ತು ಮೂವರು ಗಂಡು ಮಕ್ಕಳಿದ್ದಾರೆ.