ಮುಂಬೈ: ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಶೀಘ್ರದಲ್ಲೇ ರಾಜಕೀಯಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹೌದು ಲಭ್ಯ ಮಾಹಿತಿಯ ಪ್ರಕಾರ, ಇದೇ ತಿಂಗಳ 30ರಂದು ನಡೆಯಲಿರುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಟಿ ಕಂಗನಾ ರಣಾವತ್ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ನಟಿ ಕಂಗನಾ ರಣಾವತ್ ಅವರು ಮೂಲತಃ ಮಂಡಿ ಜಿಲ್ಲೆಯ ಭಾಂಬ್ಲಾ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗಷ್ಟೇ ಅವರು ಮಂಡಿ ಸಂಸದೀಯ ಕ್ಷೇತ್ರದಲ್ಲೇ ಬರುವ ಮನಾಲಿಯಲ್ಲಿ ತಮ್ಮ ಹೊಸ ಮನೆಯನ್ನು ನಿರ್ಮಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.