BIG NEWS: ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ

ದಕ್ಷಿಣ ಕನ್ನಡ: ರಾಜ್ಯ ಬಿಜೆಪಿ ಯುವ ಮೋರ್ಚಾದ ಮುಖಂಡನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಹೌದು, ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ…

Praveen Nettaru vijayaprabha news

ದಕ್ಷಿಣ ಕನ್ನಡ: ರಾಜ್ಯ ಬಿಜೆಪಿ ಯುವ ಮೋರ್ಚಾದ ಮುಖಂಡನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.

ಹೌದು, ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೃತ ಮುಖಂಡನಾಗಿದ್ದು, ಮೃತನು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಎನ್ನಲಾಗಿದೆ.

ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಂಗಡಿ ಬಳಿಯೇ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.