ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಜೈಲು ಸೇರುತ್ತಾರೆಂದು ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಪಿಎಸ್ಐ ನೇಮಕಾತಿಯಲ್ಲಿ ಮೊದಲು ಅಕ್ರಮ ನಡೆದಿಲ್ಲ ಎಂದಿದ್ದ ಸಚಿವರು, ಬಳಿಕ ಹಿರಿಯ ಐಪಿಎಸ್ ಅಧಿಕಾರಿಯನ್ನು ಬಲಿಪಶು ಮಾಡಿದರು. ಪ್ರಕರಣ ಸಂಬಂಧ ಈವರೆಗೆ 46 ಅಧಿಕಾರಿಗಳನ್ನು ಬಂಧಿಸಲಾಗಿದೆ. ಶೀಘ್ರವೇ ಸಚಿವರೂ ಜೈಲು ಸೇರಲಿದ್ದು, ಈಗಾಗಲೇ ಪರಪ್ಪನ ಅಗ್ರಹಾರ ಜೈಲನ್ನು ನೋಡಿಕೊಂಡು ಬಂದಿದ್ದಾರೆಂದು ಲೇವಡಿ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



