ದಾವಣಗೆರೆ: ರಾಜ್ಯದಲ್ಲಿ ಸದ್ಯಕ್ಕೆ ಬ್ಲ್ಯಾಕ್ ಫಂಗಸ್ ಗೆ ಲಸಿಕೆ ಇಲ್ಲ. ಆದರೆ ಮುಂದಿನ 2-3 ದಿನಗಳ ಒಳಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ, 15ರಿಂದ 20 ಮಂದಿಗೆ ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಎಲ್ಲರಿಗೂ ಕೂಡ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಲಸಿಕೆ ಬರುವವರಿಗೆ ಇಎನ್ ಟಿ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಕಪ್ಪು ಶಿಲೀಂಧ್ರ ಸೋಂಕು ಸಾಂಕ್ರಾಮಿಕ ರೋಗವಲ್ಲ, ಜನ ಹೆದರುವುದು ಬೇಡ ಎಂದು ಮನವಿ ಸಚಿವ ಸುಧಾಕರ್ ಅವರು ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.