BIG NEWS: ಬಿಜೆಪಿ ಶಾಸಕನಿಗೆ ಮಹಿಳೆಯಿಂದ ಬ್ಲಾಕ್ ಮೇಲ್…?

ಸೇಡಂ: ಸೇಡಂ ಬಿಜೆಪಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ ತಮ್ಮ ವಿರುದ್ಧದ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಮಹಿಳೆ ಹಾಗೂ ಆಕೆಯ ಪತಿ ಇಬ್ಬರ ವಿರುದ್ಧ ಬ್ಲಾಕ್ ಮೇಲ್ ಕೇಸ್ ದಾಖಲಿಸಿದ್ದೇನೆ ಎಂದು…

Raj Kumar Patil Telkur

ಸೇಡಂ: ಸೇಡಂ ಬಿಜೆಪಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ ತಮ್ಮ ವಿರುದ್ಧದ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಮಹಿಳೆ ಹಾಗೂ ಆಕೆಯ ಪತಿ ಇಬ್ಬರ ವಿರುದ್ಧ ಬ್ಲಾಕ್ ಮೇಲ್ ಕೇಸ್ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, 2 ಕೋಟಿ ಹಣ ನೀಡುವಂತೆ ಮಹಿಳೆ ಹಾಗೂ ಆಕೆಯ ಪತಿ ಇಬ್ಬರೂ ನನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದರು. ಫೆಬ್ರುವರಿ 5ರಂದು ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಆಕೆ ಹಾಗೂ ಆಕೆಯ ಪತಿ ಇಬ್ಬರನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನನ್ನ ವಿರುದ್ಧ ಅನಗತ್ಯ ಆರೋಪ ಮಾಡಲಾಗಿದ್ದು, ನಾನು ಸಾರ್ವಜನಿಕ ಜೀವನದಲ್ಲಿರುವವನು ಇಂತಹ ಆರೋಪ ಸಹಜ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಾನು ಆರೋಪ ಮಾಡಲ್ಲ. ನಾನು ಕಾನೂನು ಹೋರಾಟಕ್ಕೆ ಸಿದ್ಧನಿದ್ದು, ಕಾನೂನಿನ ಮೇಲೆ ಅಪಾರ ಗೌರವವಿದೆ ಎಂದು ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ ಹೇಳಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.