ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು.
ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ಮಗು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನವಜಾತ ಶಿಶುವನ್ನು ಕಸದ ಬುಟ್ಟಿಗೆ ಎಸೆದ ವ್ಯಕ್ತಿಯನ್ನು ಗುರುತಿಸಲು ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.