ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ವೇಳೆ ಮೊಟ್ಟೆ ನೀಡುವ ಯೋಜನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.
ಹೌದು, ಬಿಸಿಯೂಟದ ವೇಳೆ ಮೊಟ್ಟೆ ನೀಡುವ ಯೋಜನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಆದರೆ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲು ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಅದರಂತೆ 100 ದಿನಗಳ ಬದಲಿಗೆ 46 ದಿನ ಮಾತ್ರ ಮೊಟ್ಟೆ ವಿತರಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ವಾರ್ಷಿಕ 125 ಕೋಟಿ ರೂಪಾಯಿ ವೆಚ್ಚ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.