ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ (86) ಅವರು ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯ ಹಿನ್ನಲೆ ಕಿಡ್ನಿ ವೈಫಲ್ಯ, ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ, ಹಿರಿಯ ನಟ ರಾಜೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಫೆ 9 ರಂದು ಬೆಂಗಳೂರಿನ ಕಸ್ತೂರಿ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ 86 ವರ್ಷದ ರಾಜೇಶ್ ಅವರು ಇಂದು ಮೃತಮಟ್ಟಿದ್ದಾರೆ.
ಇನ್ನು, ಹಲವು ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿದ್ದ ಹಿರಿಯ ನಟ ರಾಜೇಶ್ ಅವರು ಸೊಸೆ ತಂದ ಸೌಭಾಗ್ಯ, ದೇವರ ಗುಡಿ, ವೀರ ಸಂಕಲ್ಪ ಸೇರಿದಂತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರ ಉಳಿದುಕೊಂಡಿದ್ದರು.
ಇನ್ನು ಹಿರಿಯ ನಟ ಮೃತ ರಾಜೇಶ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಅದರಲ್ಲಿ ನಟಿ ಆಶಾರಾಣಿ ನಟ ಅರ್ಜುನ್ ಸರ್ಜಾ ಅವರನ್ನು ಮದುವೆಯಾಗಿದ್ದಾರೆ.