ಯಡಿಯೂರಪ್ಪ ವಿರುದ್ಧದ POCSO ಪ್ರಕರಣದ ಮಧ್ಯಂತರ ತಡೆಯಾಜ್ಞೆ ಅರ್ಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ಈ…

ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟಿನ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಡಿಸೆಂಬರ್ 12 ರಂದು ಮಧ್ಯಾಹ್ನ 3:30ಕ್ಕೆ ಮಂದೂಡಿ ಆದೇಶ ಹೊರಡಿಸಿದ್ದರು.

ಇಂದು ವಿಚಾರಣೆ ಆರಂಭವಾದ ವೇಳೆ, ಬಿ ಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು, ಆರೋಪಿತ ಘಟನೆ ನಡೆದಿರುವುದು ಫೆಬ್ರವರಿ 2 ಬೆಳಗ್ಗೆ 11 ರಿಂದ 11:30 ವರೆಗೆ ಬಿಎಸ್ ಯಡಿಯೂರಪ್ಪ ಅವರ ಮನೆಯಲ್ಲಿ ಈ ಒಂದು ಘಟನೆ ನಡೆದಿರುವುದಾಗಿ ಆರೋಪವಿದೆ. 20 ಮತ್ತು 25 ಜನರ ಸಮ್ಮುಖದಲ್ಲಿ ನಡೆಯುವುದು ಸಾಧ್ಯವೇ? ಒಂದೂವರೆ ತಿಂಗಳ ಬಳಿಕ ದೂರು ದಾಖಲಿಸಲಾಗಿದೆ.

ಈ ಮಧ್ಯೆ ಹಲವು ಬಾರಿ ದೂರುದಾರರು ಬಿಎಸ್ ಯಡಿಯೂರಪ್ಪ ಅವರ ಮನೆಗೆ ಬಂದಿದ್ದಾರೆ. ದೂರುದಾರ ಮಹಿಳೆ ನಟೋರಿಯಸ್ ಆಗಿದ್ದು, ಮಹಿಳೆ ಮೇಲೆ 56 ಕೇಸ್ ಇದೆ. ಭೂಮಿಯ ಮೇಲಿರುವ ಎಲ್ಲರ ಮೇಲು, ಆ ಮಹಿಳೆ ಕೇಸ್ ಹಾಕಿದ್ದರು. ಮಹಿಳೆ ತನ್ನ ಪತಿ ಹಾಗೂ ಪೊಲೀಸ್ ಆಯುಕ್ತರ ವಿರುದ್ಧ ಕೂಡ ದೂರು ಸಲ್ಲಿಸಿದ್ದರು. ದೂರುದಾರ ಮಹಿಳೆ ಪತಿ, ಮಗ ಮತ್ತು ಎಡಿಜಿಪಿ ಮೇಲು ದೂರು ಸಲ್ಲಿಸಿದರು. ಅವರ ಪಾರ್ಟಿ ಲೀಡರ್ ಉಗ್ರಪ್ಪ ಮೇಲು ಕೇಸ್ ಹಾಕಿದ್ದಾರೆ ಎಂದು ವಾದ ಮಂಡಿಸಿದರು.

Vijayaprabha Mobile App free

ಮೃತ ಮಹಿಳೆಯ ಮೇಲೆ ಅಪಮಾನಕಾರಿ ಹೇಳಿಕೆ ಸರಿಯಲ್ಲವೆಂದು ಆಕ್ಷೇಪ ವ್ಯಕ್ತವಾಯಿತು. ಎಸ್‌ಪಿಪಿ ರವಿವರ್ಮ ಕುಮಾರ್ ಮತ್ತು ಬಾಲನ್ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿ ಆದೇಶ ಹೊರಡಿಸಿತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply