ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿ ಮೃತಪಟ್ಟ ಯುವಕರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ.
ಹೌದು, ಸುದ್ದಿಗೋಷ್ಠಿ ಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಯಡಿಯೂರಪ್ಪ ಅವರು, ‘ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಪ್ರತಿ ಬಿಪಿಎಲ್ ಕಾರ್ಡ್ ದಾರರ ಕುಟುಂಬಗಳಿಗೆ (ಒಬ್ಬರಿಗೆ) ಸರ್ಕಾರದಿಂದ ಒಂದು 1 ಲಕ್ಷ ಪರಿಹಾರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು, ಸಿಎಂ ಯಡಿಯೂರಪ್ಪ ಅವರು ಮೂರನೇ ಪ್ಯಾಕೇಜ್ ಘೋಷಣೆ ಮಾಡಿದ್ದು 250 ರಿಂದ 300 ಕೋಟಿ ಮೀಸಲಿಡಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಮಾರ್ಗಸೂಚಿ ಪ್ರಕಟವಾಗಬೇಕಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.