ಬೆಂಗಳೂರಿನಲ್ಲಿ ಕಟ್ಟಡ ಕುಸಿತ: ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ (deceased family) ಸಿಎಂ ಸಿದ್ದರಾಮಯ್ಯ (Siddaramaiah) ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹೌದು, ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ…

Siddaramaiah

ಬೆಂಗಳೂರು: ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ (deceased family) ಸಿಎಂ ಸಿದ್ದರಾಮಯ್ಯ (Siddaramaiah) ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಹೌದು, ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಕಾರ್ಮಿಕರು ಮೃತಪಟ್ಟಿರುವುದು ಗೊತ್ತೇ ಇದೆ. ಇದೀಗ ಇಂದು ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ ವೈದ್ಯಕೀಯ ವೆಚ್ಚ ಭರಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಟ್ಟಡ ಕುಸಿತ : ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಮೋದಿ

Vijayaprabha Mobile App free

ಇನ್ನು, ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈಗಾಗಲೇ ದುರಂತದಲ್ಲಿ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ. 8 ಜನರನ್ನು ರಕ್ಷಿಸಲಾಗಿದ್ದು, 6 ಜನ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದು, ಕಳಪೆ ಕಾಮಗಾರಿಯಿಂದ ಕಟ್ಟಡ ಬಿದ್ದಿದೆ ಮುಂದೆ ಈ ರೀತಿ ಘಟನೆ ಆಗದಂತೆ ಸೂಕ್ತವಾದಂತಹ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳಿಗೆ ನೋಟಿಸ್ ಕೊಡುವುದಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.