ಉಡುಪಿ: ಈಗಾಗಲೇ ದೇಶದೆಲ್ಲೆಡೆ ಅಗ್ನಿಪಥ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಈಗ ಅಗ್ನಿವೀರರಿಗೆ ರಾಜ್ಯ ಸರ್ಕಾರ ಬಂಪರ್ ಆಫರ್ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಮಾಜ ಕಲ್ಯಾಣ ಇಲಾಖೆಯಿಂದ ಸರ್ಕಾರಕ್ಕೆ ಟಿಪ್ಪಣಿ ನೀಡಲಾಗಿದ್ದು, 75% ಹುದ್ದೆ ಅಗ್ನಿವೀರರಿಗೆ ಮೀಸಲಿಡುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ಅಲ್ಲದೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕ ಹುದ್ದೆಗಳು ಜೊತೆಗೆ ವಸತಿ ನಿಲಯಗಳಿಗೆ ವಾರ್ಡನ್ ಹುದ್ದೆಗಳನ್ನು ಅಗ್ನಿವೀರರಿಗೆ ಮೀಸಲಿಡಲು ಯೋಚನೆ ಇದೆ ಎಂದು ಸಚಿವರು ಹೇಳಿದ್ದಾರೆ.




